ದ್ವಿತೀಯ ಪಿಯುಸಿ ಪರೀಕ್ಷೆ ನಿಷೇಧಾಜ್ಞೆ ಜಾರಿ.

ಕೊಪ್ಪಳ ಮಾ. ೦೫ (ಕ
ವಾ) ಕೊಪ್ಪಳ ಜಿಲ್ಲೆಯ ೧೪ ಪರೀಕ್ಷಾ ಕೇಂದ್ರಗಳಲ್ಲಿ ಮಾ. ೧೧ ರಿಂದ ೨೮ ರವರೆಗೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಬಗೆಯ ಅಕ್ರಮಗಳು
ಜರುಗದಂತೆ ಸುಗಮ ಪರೀಕ್ಷೆ ನಡೆಸಲು ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ದಿನಗಳಂದು
ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ
ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
    
ನಿಷೇಧಾಜ್ಞೆಯನ್ವಯ ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧೨-೧೫
ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ
ಎಸ್‌ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಕೇಂದ್ರ ಮುಂತಾದವುಗಳನ್ನು
ನಿಷೇಧಿಸಲಾಗಿದೆ.  ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ
ಪರೀಕ್ಷಾ ಕಾರ್ಯ ನಿಯೋಜಿತ ಸಿಬ್ಬಂದಿ ಹೊರತುಪಡಿಸಿ, ಇತರರಿಗೆ ಪ್ರವೇಶ
ನಿರ್ಬಂಧವಿರುತ್ತದೆ.  ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಬರೆದು
ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.  ನಿಷೇಧಿತ
ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ ಎಂದು
ಆದೇಶದಲ್ಲಿ ತಿಳಿಸಿದೆ.
Please follow and like us:
error