ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

ಕೊಪ್ಪಳ, ಜು.17 ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ
ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ
ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು,
ಪಾರ್ಸಿ ಜನಾಂಗದ 01 ರಿಂದ 08ನೇ ತರಗತಿವರೆಗಿನ ಹಾಗೂ 09 ಮತ್ತು 10ನೇ ತರಗತಿವರೆಗಿನ
ವಿದ್ಯಾರ್ಥಿಗಳು ಈ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಪಡೆಯಲಿಚ್ಛಿಸುವ 01 ರಿಂದ 08ನೇ
ತರಗತಿವರೆಗಿನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಹೊಸ ಅರ್ಜಿಯನ್ನು ಪಡೆದು ಭರ್ತಿ
ಮಾಡಿ, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಗಸ್ಟ್.14 ರೊಳಗಾಗಿ ಆಯಾ ಶಾಲೆಗೆ
ಸಲ್ಲಿಸಬಹುದಾಗಿದೆ ಮತ್ತು 09 ಮತ್ತು 10ನೇ ತರಗತಿವರೆಗಿನ ವಿದ್ಯಾರ್ಥಿಗಳು ವಿದ್ಯಾರ್ಥಿ
ವೇತನದ ಹೊಸ ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಲು ಆಗಸ್ಟ್.31 ರವರೆಗೆ ಅವಧಿ
ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ
ಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ
ಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ
ಇಲಾಖೆಯ ವೆಬ್‍ಸೈಟ್ www.gokdom.gov.in ಗೆ ಭೇಟಿ

Related posts

Leave a Comment