ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಜು. : ಕನ್ನಡ ಸಾಹಿತ್ಯ ಪರಿಷತ್ತು ಪ್ರಸಕ್ತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಂಯೋಜಿಸಲು ಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲಾಗುವ ಕನ್ನಡ ಪ್ರವೇಶ, ಕಾವಾ, ಜಾಣ, ರತ್ನ ಪರೀಕ್ಷೆಗಳನ್ನು ತೆಗೆದುಕೊಳ್ಳಬಯಸುವವರು ಅರ್ಜಿ ನಮೂನೆ, ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳಿಗಾಗಿ ನೇರವಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರನ್ನು ಆಗಸ್ಟ್ ೩೧ ರೊಳಗೆ ಸಂಪರ್ಕಿಸಬಹುದಾಗಿದೆ. ರೂ. ೩೦ ಗಳ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆ. ೧೫ ಕೊನೆಯ ದಿನಾಂಕವಾಗಿರುತ್ತದೆ. ಪರಿಕ್ಷಾರ್ಥಿಗಳು ಸಾಹಿತ್ಯ ಪರೀಕ್ಷೆಗಳ ಅರ್ಜಿಗಾಗಿ ರೂ. ೧೫ ಗಳನ್ನು ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೧೮ ಇವರಿಗೆ ಮನಿಯಾರ್ಡರ್ ಮೂಲಕ ಕಳುಹಿಸಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ೦೮೦- ೨೬೬೨೩೫೮೪ ಕ್ಕೆ ಸಂಪರ್ಕಿಸುವಂತೆ ಕಸಾಪ ಗೌರವ ಕಾರ್ಯದರ್ಶಿ ಪ್ರೊ. ಎಚ್.ಕೆ. ಮಳಲಿಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error