೧೬ ರಂದು ಕೊಪ್ಪಳಕ್ಕೆ ಜಗದೀಶಶೆಟ್ಟರ್, ಈಶ್ವರಪ್ಪ ಆಗಮನ

ಕೊಪ್ಪಳ, ಜೂ.೧೪: ಕೊಪ್ಪಳ ಲೋಕಸಭಾ ಸಂಸದರ ನೂತನ ಕಛೇರಿ ಉದ್ಘಾಟನೆ ಹಾಗೂ ರಾಜ್ಯದ ವಿಧಾನ ಪರಿಷತ್‌ಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ನಿಮಿತ್ಯ ಇದೇ ೧೬ ರಂದು ಕೊಪ್ಪಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ನೂತನ ವಿಧಾನ ಪರಿಷತ್ ಸದಸ್ಯ ಕೆ.ಎಸ್. ಈಶ್ವರಪ್ಪ ಕೊಪ್ಪಳಕ್ಕೆ ಆಗಮಿಸಲಿದ್ದಾರೆ.
ಅವರು ಅಂದು ಬೆಳಿಗ್ಗೆ ೧೦-೩೦ ಗಂಟೆಗೆ ಆಗಮಿಸಿ ನೂತನ ಸಂಸದರ ಕಛೇರಿ ಉದ್ಘಾಟಿಸಲಿದ್ದಾರೆ. ನಂತರ ಭಾಗ್ಯನಗರ ರಸ್ತೆಯ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಇದೇ ಜೂ.೨೦ ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ ಜಿ. ನಮೋಶಿ ಅವರು ಕುರಿತು ಪ್ರಚಾರ ಸಭೆ ನಡೆಸಲಿದ್ದಾರೆ. ಈ ಸಂಭೆಯಲ್ಲಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಕೊಪ್ಪಳ ರಾಯಚೂರು ಜಿಲ್ಲೆಗಳ ಸಂಸದರು ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು ವಿಧಾನ ಪರಿಷತ್ ಸದಸ್ಯರು, ಮಾಜಿ ವಿಧಾನ ಪರಿಷತ್ ಸದಸ್ಯರು ಜಿಲ್ಲಾ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಪಕ್ಷದ ಹಿರಿಯರು ಪದಾಧಿಕಾರಿಗಳು ಕಾರ್ಯಕರ್ತರು  ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಹ ಮಧ್ಯಮ ವಕ್ತಾರ ಪರಮಾನಂದ ಯಾಳಗಿ  ತಿಳಿಸಿದ್ದಾರೆ.

Leave a Reply