ಪರಿಶಿಷ್ಟ ವರ್ಗದವರಿಗೆ ವಾಲ್ಮೀಕಿ ಪ್ರಶಸ್ತಿ : ಪ್ರಸ್ತಾವನೆಗೆ ಆಹ್ವಾನ

 ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯಂದು ಅರ್ಹರಿಗೆ ವಾಲ್ಮೀಕಿ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ವರ್ಗದ ಸಮುದಾಯಕ್ಕೆ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
  ಅಕ್ಟೋಬರ್ ೦೮ ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯ ದಿನದಂದು ಅರ್ಹರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲು ಇಬ್ಬರು ಅರ್ಹರನ್ನು ಜಿಲ್ಲೆಯಿಂದ ಆಯ್ಕೆ ಮಾಡಿ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಬೆಂಗಳೂರು ಇವರಿಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ. 
ಪ್ರಸ್ತಾವನೆ ಸಲ್ಲಿಸಬಯಸುವವರು, ಕನಿಷ್ಠ ೩೫ ವರ್ಷಗಳಾಗಿರಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಆಯ್ಕೆ ಮಾಡುವ ವ್ಯಕ್ತಿಯು ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಜನಸಾಮಾನ್ಯರಲ್ಲಿ ಸ್ವಯಂಸೇವಕರಾಗಿ ಮಾನ್ಯತೆ, ಕೀರ್ತಿ, ಪ್ರಖ್ಯಾತಿ ಹೊಂದಿರಬೇಕು. ಅವರು ಸಾಧನೆ ಮಾಡಿರುವ ಸಾಧನೆಗಳ ಬಗ್ಗೆ ದಾಖಲಾತಿ ಹೊಂದಿರಬೇಕು. ಪ್ರಮುಖವಾಗಿ ಪರಿಶಿಷ್ಟ ವರ್ಗದವರ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕವಾಗಿ ಸಧೃಡಗೊಳಿಸಲು ಸ್ವಯಂ ಪ್ರೇರಣೆಯಿಂದ ದುಡಿಯುವ ವ್ಯಕ್ತಿಯಾಗಿರಬೇಕು. ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಇವುಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸುವುದು ಅಥವಾ ದೌರ್ಜನ್ಯ ನಿಯಂತ್ರಿಸಲು ಸಹಕಾರಿಯಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು. ಮಹರ್ಷಿ ವಾಲ್ಮೀಕಿಯವರ ತತ್ವ ಹಾಗೂ ಆದರ್ಶಗಳನ್ನು ಸಾಕಾರಗೊಳಿಸುವಂತಹ ಯಾವುದೇ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರುವ ವ್ಯಕ್ತಿಯಾಗಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ/ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಆ.೩೦ ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್. ಜನ್ನು   ತಿಳಿಸಿದ್ದಾರೆ.
Please follow and like us:
error