You are here
Home > Koppal News > ವಿದ್ಯಾವಿಕಾಸ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ವಿದ್ಯಾವಿಕಾಸ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕೊಪ್ಪಳ-30- ಇತ್ತೀಚಿಗೆ ನಗರದ ವಿದ್ಯಾವಿಕಾಸ ಶಾಲೆಯಲ್ಲಿ ಭಕ್ತ ಕನಕದಾಸರ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ರಾಘವೇಂದ್ರ ಫಾನಘಂಟಿ ಅಧ್ಯಕ್ಷರು ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ (ರಿ) ಮಾತನಾಡಿ ದಾಸ ಪರಂಪರೆಯಲ್ಲಿ ಕನಕದಾಸರು ಒಬ್ಬ ಶ್ರೇಷ್ಟ ದಾಸರಾಗಿದ್ದಾರೆ ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ದಾಂತಗಳಿಗೆ ನೀಡಿದ ಕಾಣಿಕೆ ಅವಿಸ್ಮರಣೀಯ ಕನಕದಾಸರು ಜಾತಿ ಪದ್ದತಿಯ ತಾರ ತಮ್ಯವನ್ನು ಅಲ್ಲಗಳೆದು ಜನರನ್ನು ಸನ್ಮಾರ್ಗದಡೆಗೆ ನಡೆಸಿದರು ಎಂದು ಹೇಳಿ ಈ ಸಂದರ್ಭದಲ್ಲಿ ಹೊಂಗಿರಣ ಶಿಕ್ಷಣ ಸಂಸ್ಥೆ ಸಾಗರ ತಾಲೂಕ ಶಿವಮೂಗ್ಗ ಜಿಲ್ಲೆ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೇಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹಾಗೇ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Top