You are here
Home > Koppal News > ನ.೨೭ ರಿಂದ ಭಾಗ್ಯನಗರದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

ನ.೨೭ ರಿಂದ ಭಾಗ್ಯನಗರದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

 ಜಿಲ್ಲಾ ಪಂಚಾಯತಿ,  ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಭಾಗ್ಯನಗರ ಇವರ ಸಂಯುಕ್ತ ಆಶ್ರಯದಲ್ಲಿ ನ.೨೭ ರಿಂದ ೨೮ ರವರೆಗೆ ಬೆಳಿಗ್ಗೆ ೧೦.೩೦ ಕ್ಕೆ  ಭಾಗ್ಯನಗರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 
ಕಾರ್ಯಕ್ರಮದ ಉದ್ಘಾಟನೆಯನ್ನು ನ. ೨೭ ರಂದು ಬೆ. ೧೦-೩೦ ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ  ಜಿಲ್ಲಾ ಪಂಚಾಯತ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ಸಂಡೂರ, ಜಿ.ಪಂ.ಸದಸ್ಯೆ ವನಿತಾ ಗಡಾದ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ತಾ.ಪಂ. ಸದಸ್ಯರಾದ ದಾನಪ್ಪ ಜಿ.ಕವಲೂರು, ಶ್ರೀನಿವಾಸ ಹ್ಯಾಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಟಿ.ಡಿ. ಪವಾರ, ಭಾಗ್ಯನಗರ ಗ್ರಾ.ಪಂ.ಅಧ್ಯಕ್ಷ ಹೊನ್ನೂರಸಾಬ, ಸೇರಿದಂತೆ ಜಿ.ಪಂ, ತಾ.ಪಂ. ಹಾಗೂ ನಗರಸಭೆ ಸರ್ವ ಸದಸ್ಯರು ಭಾಗವಹಿಸುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು   ತಿಳಿಸಿದ್ದಾರೆ.

Leave a Reply

Top