fbpx

ನ. ೨೧ ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ.

ಕೊಪ್ಪಳ, ನ.೨೦  ಕೊಪ್ಪಳ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆಯ
ಉಪನಿರ್ದೇಶಕರ ಕಾರ್ಯಾಲಯ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರುಗಳ
ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ
ಪ್ರತಿಭಾ ಕಾರಂಜಿ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ನ.೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
     ಜಿಲ್ಲಾ
ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ
ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಶಾಸಕರುಗಳಾದ
ದೊಡ್ಡನಗೌಡ ಹೆಚ್.ಪಾಟೀಲ್, ಇಕ್ಬಾಲ್ ಅನ್ಸಾರಿ, ಬಸವರಾಜ ರಾಯರೆಡ್ಡಿ, ಹಾಲಪ್ಪ ಆಚಾರ್,
ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್
ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ,
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್ ಸಾಲೋಣಿ, ನಗರಸಭೆ ಅಧ್ಯಕ್ಷೆ
ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಕೊಪ್ಪಳ ಜಿಲ್ಲಾ
ಉಸ್ತುವಾರಿ ಕಾರ್ಯದರ್ಶಿ ಅನಿಲ್‌ಕುಮಾರ್ ಟಿ.ಕೆ, ಪ್ರಭಾರಿ ಜಿಲ್ಲಾಧಿಕಾರಿ ಡಾ||
ಪ್ರವೀಣ ಕುಮಾರ ಜಿ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ
ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ. ತ್ಯಾಗರಾಜನ್, ಕರ್ನಾಟಕ
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ, ಪ್ರೌಢ ಶಾಲಾ ಸಹ
ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ ಗೌಡರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ
ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು
ಡಿಡಿಪಿಐ ಎ. ಶ್ಯಾಮಸುಂದರ್ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!