ವಿದ್ಯುತ್ ಪೂರೈಕೆ ಸ್ಥಗಿತ : ಶಾಸಕರ ಪ್ರತಿಭಟನೆ

ಕೊಪ್ಪಳ : ನಗರದ ಹೂವಿನಾಳ ರಸ್ತೆಯಲ್ಲಿರುವ ಆಶ್ರಯ ಕಾಲೋನಿಗೆ ಕಳೆದ 20 ದಿನಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು ಅದನ್ನು ಸರಿಪಡಿಸುವಂತೆ ಆಗ್ರಹಿಸಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಳೆದ 20 ದಿನಗಳಿಂದ ವಿದ್ಯುತ್ ಇಲ್ಲದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ , ಜೆಸ್ಕಾಂ ನ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ತಕ್ಷಣ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸಂಗಣ್ಣ ಕರಡಿಯವರ ನೇತೃತ್ವದಲ್ಲಿ ಜೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಲಾಯಿತು. ನಂತರ ಜೆಸ್ಕಾಂ ಅಧಿಕಾರಿಗಳು ರಾತ್ರಿಯೊಳಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದ ಮೇಲೆ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು

Leave a Reply