ಹೈ-ಕ. ವಿಶೇಷ ಸ್ಥಾನಮಾನಕ್ಕೆ ರಾಷ್ಟ್ರಪತಿ ಅಂಕಿತ : ಶಾಸಕ ರಾಘವೇಂದ್ರ ಹಿಟ್ನಾಳ ಅಭಿನಂದನೆ

 ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ನೇ (ಜೆ) ವಿಧೆಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಈ ಭಾಗದ ಜನರ ದಶಕಗಳ ಕನಸು ಈಡೇರಿದಂತಾಗಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲಾ ಜನಪ್ರತಿನಿಧಿಗಳಿಗೆ ಹಾಗೂ ಸಂಘಟನೆಗಳಿಗೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ. 
ಕೊಪ್ಪಳ ಜಿಲ್ಲೆಯೂ ಸೇರಿದಂತೆ ಹೈ-ಕ ಪ್ರದೇಶ ಹಿಂದುಳಿದ ಪ್ರದೇಶವಾಗಿದ್ದು ಸಂವಿಧಾನದ ೩೭೧ನೇ (ಜೆ) ಕಲಂಗೆ ತಿದ್ದುಪಡಿ ವಿಧೆಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕುವುದರ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ದಿಗೆ ಹೊಸ ಆಯಾಮ ದೊರೆತಂತಾಗಿದೆ. ಇಂತಹ ಮಹತ್ವದ ಕಾರ್ಯಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error