ಕೊಪ್ಪಳಕ್ಕೆ ಕ್ರೀಡಾಪಟು ಅರ್ಜುನ ದೇವಯ್ಯ

ರಾಜ್ಯ ಕ್ರೀಡಾ ನೀತಿ ರಚನೆ : ಫೆ.೦೮ ರಂದು ಅಭಿಪ್ರಾಯ ಸಂಗ್ರಹ ಸಭೆ
  ರಾಜ್ಯ ಕ್ರೀಡಾ ನೀತಿ ರಚನೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಭಿಪ್ರಾಯವನ್ನು ಸಂಗ್ರಹಿಸಲು ಫೆ.೦೮ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ರಾಜ್ಯ ರಚನಾ ಸಮಿತಿಯ ಸದಸ್ಯರಾದ ಕೆ.ಎಮ್. ಸುರೇಶ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಅಥ್ಲೇಟಿಕ್ಸ್ ಕ್ರೀಡಾಪಟು ಅರ್ಜುನ ದೇವಯ್ಯ ಅವರು ಉಪಸ್ಥಿತರಿರುವರು. ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾಸಕ್ತರು, ಕ್ರೀಡಾ ಪ್ರೋತ್ಸಾಹಕರು, ಕ್ರೀಡಾಭಿಮಾನಿಗಳು ಈ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಎನ್.ಘಾಡಿ ತಿಳಿಸಿದ್ದಾರೆ.
Please follow and like us:

Related posts

Leave a Comment