ಜಿಲ್ಲೆಯಲ್ಲಿ ಕಾನೂನು ಸಾಕ್ಷರತಾ ವಾಹನ ಸಂಚಾರ : ಹಸಿರು ನಿಶಾನೆಗೆ ಚಾಲನೆ

  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾನೂನು ಸಾಕ್ಷರತಾ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನದ ಸಂಚಾರ ಕಾರ್ಯಕ್ರಮ ಮೂರು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಜರುಗಲಿದ್ದು, ಹಸಿರು ನಿಶಾನೆ ತೋರಿಸುವುದರ ಮೂಲಕ ಕೊಪ್ಪಳ ಜಿಲ್ಲೆಗೆ ಸೋಮವಾರ ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ. ಬಬಲಾದಿ  ಅವರು ಚಾಲನೆ ನೀಡಿದರು. 
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚಗರಡ್ಡಿ, ಸಿವಿಲ್ ಜಡ್ಜ್ ಹಾಗೂ ಜೆ.ಎಂ.ಎಫ್.ಸಿ.ಯ ಕಾವೇರಿ, ಲಾ ಅಕಾಡೆಮಿ ಅಧ್ಯಕ್ಷರಾದ ಸಂಧ್ಯಾ ಬಿ. ಮಾದಿನೂರು, ನಿವೃತ್ತ ನ್ಯಾಯಾಧೀಶರಾದ ಬಿ.ಕೆ.ಬೂತೆ, ಹಿರಿಯ ವಕೀಲರಾದ ಸಿ.ವಿ.ಕಟ್ಟಿ, ಎ.ಎ.ಚೌತಾಯಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರುಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು. 
Please follow and like us:
error