ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

 ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಜಿಲ್ಲೆಯಲ್ಲಿ 4 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ 3 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಒಟ್ಟು 7 ವಿದ್ಯಾರ್ಥಿ ನಿಲಗಳಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಸಂಬಂಧಿಸಿದ ತಾಲ್ಲೂಕ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. (5ನೇ ತರಗತಿಯಿಂದ 10ನೇ ತರಗತಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಪಿ.ಯು.ಸಿ ಮತ್ತು ಪದವಿ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ನಿಲಯಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ.)
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ, ಕೊಪ್ಪಳ, ಗಂಗಾವತಿ ನಗರ (ಬಾಲಕ-50), ಗಂಗಾವತಿ ನಗರ (ಬಾಲಕಿ-50), ಬಸವಪಟ್ಟಣ (ಬಾಲಕ-50) ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಕೊಪ್ಪಳ (ಬಾಲಕಿ-75), ಗಂಗಾವತಿ ನಗರ (ಬಾಲಕ-50), (ಬಾಲಕಿ-50) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿರುವ ಸೌಲಭ್ಯ : ರೂ 900/- ಮಾಹೆಯಾನ ದರದಲ್ಲಿ ಆಹಾರ ಪೂರೈಕೆ ವ್ಯವಸ್ಥೆ, ಉಚಿತ ವಸತಿ ಸೌಲಭ್ಯ ನೀಡಲಾಗುತ್ತದೆ, ರೂ 25/- ದರದಲ್ಲಿ ಎಣ್ಣೆ, ಬಟ್ಟೆ ಸಾಬೂನು, ಸ್ನಾನದ ಸಾಬೂನು,ಪೇಸ್ಟ್ ಇತ್ಯಾದಿ ಸಾದಿಲ್ವಾರು ವೆಚ್ಚಗಳ ನೀಡಿಕೆ. ವಾರ್ಷಿಕ ರೂ 400/-ದರದಲ್ಲಿ ಸಮವಸ್ತ್ರ ಸರಬರಾಜು, ವಾರ್ಷಿಕ ರೂ 200/- ರ ದರದಲ್ಲಿ ಪಠ್ಯಪುಸ್ತಕ ಮತ್ತು ಲೇಖನ ಸಾಮಗ್ರಿಗಳ ಸರಬರಾಜು, ಪ್ರತಿ ವಿದ್ಯಾರ್ಥಿನಿಲಯಕ್ಕೆ ವಾರ್ಷಿಕ ರೂ 750/- ರಂತೆ ದಿನಪತ್ರಿಕೆ ಮತ್ತು ವಾರಪತ್ರಿಕೆ ಸರಬರಾಜು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ 3 ವಿಶೇಷ ಭೋದಕರಿಂದ ಪಾಠ ಭೋದನೆ (ಗಣಿತ, ಇಂಗ್ಲಿಷ್ ಮತ್ತು ವಿಜ್ಞಾನ) ಸೌಲಭ್ಯವನ್ನು ಕಲ್ಪಿಸಲಾಗಿದೆ.
ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿರುವ ಸೌಲಭ್ಯ : ರೂ 1000/- ಮಾಹೆ ದರದಲ್ಲಿ ಉಚಿತ ಆಹಾರ ಪೂರೈಕೆ ವ್ಯವಸ್ಥೆ ಮತ್ತು ಉಚಿತ ವಸತಿ ಸೌಲಭ್ಯ, ಉಚಿತ ಗ್ರಂಥಾಲಯ ವ್ಯವಸ್ಥೆ/ದಿನಪತ್ರಿಕೆ ವ್ಯವಸ್ಥೆ, ಹಾಸಿಗೆ ಹೊದಿಕೆ ನೀಡಿಕೆ, ಸ್ನಾನಕ್ಕೆ ಬಿಸಿನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ದಾಖಲೆ ಮಾಡಿಕೊಳ್ಳಲು ವೇಳಾಪಟ್ಟಿ  : ಮೇ.25 ರಿಂದ ಹೊಸ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸುವುದು, ಜೂ.20 ಅರ್ಜಿ ಸಲ್ಲಿಸಲು ಕೊನೆಯ ದಿನ, ಜೂ.25 ಕ್ಕೆ ಅರ್ಜಿಗಳ ಪರಿಶೀಲನೆ ಹಾಗೂ ಆಯ್ಕೆ ಹೊಸದಾಗಿ ಪ್ರವೇಶ, ಜೂ.26 ರಂದು ಆಯ್ಕೆ ಪಟ್ಟಿ ಪ್ರಕಟಣೆ, ಜೂ.01 ರಂದು ನವೀಕರಣ ವಿದ್ಯಾರ್ಥಿಗಳಿಗೆ ಹಾಗೂ ಹೊಸ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರಾರಂಭ, 
ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಕ್ಕೆ ದಾಖಲೆ ಮಾಡಿಕೊಳ್ಳಲು ವೇಳಾಪಟ್ಟಿ  : ಜುಲೈ-01 ಹೊಸ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸುವುದು, ಜುಲೈ-15 ಅರ್ಜಿ ಸಲ್ಲಿಸಲು ಕೊನೆಯ ದಿನ, ಜುಲೈ-01 ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರಾರಂಭಿಸುವುದು, ಜುಲೈ-20 ಹೊಸ ವಿದ್ಯಾರ್ಥಿಗಳ ಆಯ್ಕೆ ಸಮೀತಿ ಸಭೆ ನಡೆಸುವುದು, ಜುಲೈ-21 ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆ, ಜುಲೈ-25 ಹೊಸ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರಾರಂಭಿಸುವುದು, 
ಈ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳಿಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕುಗಳ ವಿಸ್ತರಣಾಧಿಕಾರಿಗಳು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿ ಎ.ಎಸ್. ಜಂಬಾಳೆ ಮೊ. 9480817782, ಆರ್.ಎರಿಸ್ವಾಮಿ ತಾಲ್ಲೂಕ ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿಗಳು ಗಂಗಾವತಿ ಮೊ.9480817781, ಬಸವರಾಜ್ ಕೊಳ್ಳಿ ತಾಲ್ಲೂಕ ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿಗಳು ಕುಷ್ಟಗಿ ಮೊ.9480817783, ಪರಮೇಶ್ವರ್ ತಾಲ್ಲೂಕ ಹಿಂದುಳಿದ ವರ್ಗಗಳ ವಿಸ್ತಾರಣಾಧಿಕಾರಿಗಳು ಯಲಬುರ್ಗಾ ಮೊ.9480817784 ಇವರನ್ನು ಸಂಪರ್ಕಿಸಬಹುದಾಗಿದೆ.
Please follow and like us:
error

Related posts

Leave a Comment