ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಕೊಪ್ಪಳ, ಜು. ೦೧ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದವರಾಗಿರಬೇಕು. ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-೧ ಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ೨.೫೦ ಲಕ್ಷ ರೂ. ಮೀರಿರಬಾರದು ಮತ್ತು ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ೧.೦೦ ಲಕ್ಷ ರೂ.ಗಳಿಗೆ ಮೀರಿರಬಾರದು. ತಾಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತಿತರ ವಿವರಗಳಿಗೆ ವೆಬ್‌ಸೈಟ್
www.backwardclasses.kar.nic.in 
ನ್ನು  ವೀಕ್ಷಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ.೧೯ ಕೊನೆ ದಿನಾಂಕವಾಗಿದ್ದು, ಅರ್ಜಿಗಳನ್ನು
http://karepass.cgg.gov.in ನಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ : ೦೮೦-೪೪೫೫೪೪೪೪ ಅಥವಾ ಮೊಬೈಲ್ ಸಂಖ್ಯೆ : ೯೪೮೦೮೧೮೦೧೩ ನ್ನು ಸಂಪರ್ಕಿಸಬಹುದಾಗಿದೆ.

Related posts

Leave a Comment