ಕನ್ನಡ ಭಾಷಾ ಮಾಧ್ಯಮ: ಬಜೆಟ್ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಂಪುಟ ತೀರ್ಮಾನ

ಬೆಂಗಳೂರು,  : ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಒಂದು ವಿಷಯವನ್ನಾಗಿ ಕಲಿಸುವ ತೀರ್ಮಾನವನ್ನು ಕೈಗೊಂಡಿರುವ ಸರಕಾರ, ಈ ಸಂಬಂಧ ಕನ್ನಡ ಭಾಷಾ ಕಲಿಕೆ ವಿಧೇಯಕ-2015ನ್ನು ಪ್ರಸಕ್ತ ಬಜೆಟ್ ಅಧಿವೇಶನದಲ್ಲೇ ಮಂಡಿಸಲು ನಿರ್ಧರಿಸಿದೆ.
 ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದರಿಂದ ಹತ್ತನೆ ತರಗತಿಯವರೆಗೂ ಕನ್ನಡ ಭಾಷೆಯನ್ನು ಒಂದು ಕಡ್ಡಾಯ ವಿಷಯವಾಗಿ ಕಲಿಸಲು ಹಾಗೂ ಒಂದರಿಂದ ಐದನೆ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡುವ ಸಂಬಂಧ ಕಾಯ್ದೆ ತರಲು ತೀರ್ಮಾನ ಕೈಗೊಳ್ಳಲಾಗಿದೆ. 2015-16ನೆ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲೂ ಒಂದರಿಂದ 10ನೆ ತರಗತಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಕನ್ನಡ ಭಾಷಾ ಕಲಿಕೆ ವಿಧೇಯಕ-2015ನ್ನು ಜಾರಿಗೆ ತಂದು, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಲು ಸರಕಾರವು ತೀರ್ಮಾನಿಸಿದೆ.
ರಾಜ್ಯದಲ್ಲಿ ಹೊಸದಾಗಿ 1,774 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಅನುಮತಿ ಕೋರಿ ಸರಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣವು ಮಾಸಾಂತ್ಯಕ್ಕೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಈ ಸಂದರ್ಭ ದಲ್ಲಿ ಸರಕಾರ ಪ್ರಮಾಣಪತ್ರದ ಮೂಲಕ ತನ್ನ ನಿರ್ಧಾರವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದೆ ಎಂದು ತಿಳಿದು ಬಂದಿದೆ.
ಶಿಕ್ಷಕರ ವರ್ಗಾವಣೆ ಪ್ರಮಾಣ ಹೆಚ್ಚಳ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದ ಶಿಕ್ಷಕರ ವರ್ಗಾವಣೆ ಪ್ರಮಾಣವನ್ನು ಶೇ.5ರಿಂದ ಶೇ.8ಕ್ಕೆ ಹೆಚ್ಚಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ದಂಪತಿ ಒಂದೆಡೆ ಕೆಲಸ ಮಾಡಲು ಹಾಗೂ ಪರಸ್ಪರ ವರ್ಗಾವಣೆಗೂ ಉಪಯುಕ್ತವಾಗಲಿದೆ. ನೂತನ ನೀತಿಯೂ 2015-16ನೆ ಸಾಲಿನಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
ಬಿಬಿಎಂಪಿ ಹಾಗೂ ಬೆಂಗಳೂರು ವಿವಿ ವಿಭಜನೆ: ಪರಿಣಾಮಕಾರಿ ಆಡಳಿತದ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ವಿಶ್ವವಿದ್ಯಾಲಯವನ್ನು ತಲಾ ಮೂರು ವಿಭಾಗಗಳನ್ನಾಗಿ ವಿಭಜಿಸಲು ಸಚಿವ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ಆದರೆ ಅಂತಿಮ ನಿರ್ಧಾರಕ್ಕೆ ಇನ್ನೂ ಬರಬೇಕಿದೆ.
Please follow and like us:
error

Related posts

Leave a Comment