ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಆದೇಶ

 ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮೇ. ೦೫ ರಂದು ಮತದಾನ ನಡೆಯಲಿದ್ದು, ಎಲ್ಲ ಕಾರ್ಮಿಕರು ತಮ್ಮ ಮತದಾನದ ಹಕ್ಕು ಚಲಾಯಿಸುವಂತಾಗಲು, ಎಲ್ಲ ಕಾರ್ಮಿಕರಿಗೆ ಅಂದು ವೇತನ ಸಹಿತ ರಜೆ ನೀಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
  ಮತದಾನ ದಿನದಂದು ತಮ್ಮ ಹಕ್ಕು ಚಲಾಯಿಸುವಂತಾಗಲು, ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಕಾರ್ಖಾನೆ, ಕೈಗಾರಿಕಾ ಸಂಸ್ಥೆ, ಅಂಗಡಿ ವಾಣಿಜ್ಯ ಸಂಸ್ಥೆ, ಇತರೆ ಕಾರ್ಮಿಕರು, ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಎಲ್ಲ ನೌಕರರಿಗೆ ನೆಗೋಷಿಯೆಬಲ್ ಇನ್ಸ್‌ಟ್ರುಮೆಂಟ್ಸ್ ಕಾಯ್ದೆ ೧೮೮೧ ಕಲಂ ೨೫ ಮತ್ತು ಪ್ರಜಾ ಪ್ರತಿನಿಧಿ ಕಾಯ್ದೆ ೧೯೫೧ ರ ಕಲಂ ೧೩೫ ಬಿ ಅನ್ವಯ ವೇತನ ಸಹಿತ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Related posts

Leave a Comment