ಮ್ಯಾಕ್ಸಿ ಕ್ಯಾಬ್ ಚಾಲಕರ ಮಾಲಕರ ಹೋರಾಟಕ್ಕೆ ಬೆಂಬಲ- ಕೆ.ಎಂ.ಸಯ್ಯದ್


ಕೊಪ್ಪಳ : ಅಧಿಕಾರಿಗಳು ತೀವ್ರ ಕಿರುಕುಳ ಕೊಡುತ್ತಿದ್ದು ಇದರಿಂದ ತಮಗೆ ಬಹಳ ಸಮಸ್ಯೆಯಾಗಿದೆ. ಇದನ್ನು ಸರಿಪಡಿಸುವುಂತೆ ಒತ್ತಾಯಿಸಿ ಜೈಭೀಮ್ ಮ್ಯಾಕ್ಸಿಕ್ಯಾಬ್ ಚಾಲಕರ ಮತ್ತು ಮಾಲಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ ಕೆ.ಎಂ.ಸಯ್ಯದ್ ಹೋರಾಟಕ್ಕೆ ಬೆಂಬಲ ಸೂಚಿಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಮ್ಯಾಕ್ಸಿ ಕ್ಯಾಬ್ ಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು. ಹೋರಾಟಗಾರರಿಗೆ ತಮ್ಮ ಬೆಂಬಲವಿದೆ ಎಂದು ಕೆ.ಎಂ.ಸಯ್ಯದ್ ಹೇಳಿದರು.
ಪ್ರತಿಭಟನೆಯಲ್ಲಿ ಜೈಭೀಮ್ ಮ್ಯಾಕ್ಸಿ ಕ್ಯಾಬ್ ಮಾಲೀಕರ ಸಂಘದ ಅಧ್ಯಕ್ಷ ಗಾಳೆಪ್ಪ ಪೂಜಾರ್, ಕಾರ್ಯದರ್ಶಿ ಕೊಟ್ರಯ್ಯ ಸಸಿಮಠ,ನಿಂಗಪ್ಪ ನಿಟ್ಟಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

Leave a Comment