ನರೇಂದ್ರ ಮೋದಿ ದೇಶದ ಪ್ರಧಾನಿಯಾಗುವುದು ನಿಶ್ಚಿತ-ಕೆ.ವಿರೂಪಾಕ್ಷಪ್ಪ

 ಸದೃಢ ಭಾರತ ದೇಶದ ನಿರ್ಮಾಣಕ್ಕೆ ನರೇಂದ್ರ ಮೋದಿ ಪಣ ತೊಟ್ಟಿದ್ದು ಈ ಬಾರಿ ನಮೋ ಪ್ರಧಾನಿಯಾಗುವುದು ನಿಶ್ಚಿತ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಕೆ.ವಿರೂಪಾಕ್ಷಪ್ಪ ಹೇಳಿದರು.
 ಅವರು ಕೊಪ್ಪಳ ಲೋಕಸಭೆ ವ್ಯಾಪ್ತಿಯ ಕನಕಗಿರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೋಂಡು ಮಾತನಾಡುತ್ತ   ಕೇಂದ್ರದ ಕಾಂಗ್ರೆಸ್ ನೇತೃತ್ವ ಯುಪಿಎ ಸರಕಾರದ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಕೇಂದ್ರ ಯುಪಿಎ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ, ಇದರಿಂದ ಈ ಬಾರಿ ಜನತೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವರು,  ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ನೇತೃತ್ವ ಸರ್ಕಾರದ ಸಾಧನೆಗಳನ್ನು ರಾಜ್ಯದ ಜನತೆ ಮರೆತಿಲ್ಲ ಇಂದಿನ ಯುವಜನಾ ಂಗ. ಈ ದೇಶಕ್ಕೆ ಮೋದಿ ಪ್ರಧಾನಿಯಾಗಬೇಕು ಎಂದು ಇಚ್ಛೆ ಹೊಂದಿದ್ದಾರೆ ಇದರಿಂದ ಇಂದು ಬಿಜೆಪಿಗೆ ವ್ಯಾಪಕ ಬೆಂಬಲ ದೊರೆಯುತ್ತೀದೆ, ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು. 
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ,ಮುಖಂಡರಾದ ಬಸವರಾಜ್ ದಡೇಸೂಗರು, ಕೊಲ್ಲಾ ಶೇಷಗಿರಿರಾವ್, ರಮೇಶ ವೈದ್ಯ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply