ಚುನಾವಣೆ : ಮೇ.೦೫ ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

   ಜಿಲ್ಲೆಯಲ್ಲಿ ಮೇ.೦೫ ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜರುಗಲಿದ್ದು, ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಅಂದು ಎಲ್ಲ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕೆ.ಪಿ.ಮುನಿಯಪ್ಪ ಅವರು ಜಿಲ್ಲೆಯ ಎಲ್ಲ ಕಾರ್ಖಾನೆಗಳು, ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ.

ಮತದಾನದ ದಿನದಂದು ಎಲ್ಲಾ ಕಾರ್ಖಾನೆಗಳಳು, ಕೈಗಾರಿಕಾ ಸಂಸ್ಥೆಗಳು, ಅಂಗಡಿ, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕರ್ನಾಟಕ ಔದ್ಯಮಿಕ ಸಂಸ್ಥೆಗಳ ಮಾಲೀಕರು, ನಿಯೋಜಕರು (ರಾಷ್ಟ್ರೀಯ ಮತ್ತು ಹಬ್ಬಗಳ ರಜೆ) ಕಾಯ್ದೆ ೧೯೬೩ ರ ಕಲಂ ೩ (ಎ) ರನ್ವಯ ಮೇ.೦೫ ರಂದು ಮತ ಚಲಾಯಿಸಲು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕೆ.ಪಿ.ಮುನಿಯಪ್ಪ  ತಿಳಿಸಿದ್ದಾರೆ.

Leave a Reply