ಸೇನಾ ನೇಮಕಾತಿ ರ್ಯಾಲಿ : ಜಿ.ಪಂ. ಸಿಇಓ ಕೃಷ್ಣ ಉದಪುಡಿ ಚಾಲನೆ

 ಕೊಪ್ಪಳದಲ್ಲಿ ಆ. 24 ರವರೆಗೆ ನಡೆಯಲಿರುವ ಭಾರತೀಯ ಸೇನಾ ನೇಮಕಾತಿ ರ್ಯಾಲಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಅಭ್ಯರ್ಥಿಗಳ ಓಟದ ಪರೀಕ್ಷೆಗೆ ನಿಶಾನೆ ತೋರುವ ಮೂಲಕ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
  ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನೇಮಕಾತಿ ರ್ಯಾಲಿ ನಡೆಯುತ್ತಿದ್ದು, ವಿವಿಧ ಜಿಲ್ಲೆಗಳಿಂದ ಸಾವಿರಾರು ಯುವಕರು ಸೇನೆಗೆ ಸೇರುವ ಬಯಕೆಯಿಂದ ಆಗಮಿಸಿದ್ದಾರೆ.  ಸೇನೆಯ ಕರ್ನಲ್ ದುಷ್ಯಂತ್ ಸಿಂಗ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಶಿವಾಜಿ ತುಕ್ಕರ್, ಜಿಲ್ಲಾ ಉದ್ಯೋಗಾಧಿಕಾರಿ ಬೀರನಾಯ್ಕರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Please follow and like us:
error