ಸಚಿವ ಕೃಷ್ಣ ಭೈರೇಗೌಡ ಅವರ ಕೊಪ್ಪಳಕ್ಕೆ : ಸಂವಾದ ಕಾರ್ಯಕ್ರಮ ರೈತರು ಪಾಲ್ಗೊಳ್ಳಲು ಮನವಿ

 ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಜ. ೩೧ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಸಚಿವರು ಅಂದು ಬೆಳಿಗ್ಗೆ ಹಂಪಿ ಎಕ್ಸ್‌ಪ್ರೆಸ್ ರೈಲಿನ ಮೂಲಕ ಕೊಪ್ಪಳಕ್ಕೆ ಆಗಮಿಸುವರು.  ಬೆಳಿಗ್ಗೆ ೧೦-೩೦ ಗಂಟೆಗೆ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮಕ್ಕೆ ತೆರಳಿ ಕೃಷಿ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಅಲ್ಲದೆ ರೈತರೊಂದಿಗೆ ಸಂವಾದ ನಡೆಸುವರು.  ೧೧-೩೦ ಗಂಟೆಗೆ ಬಸವನಬಾಗೇವಾಡಿ ತಾಲೂಕಿನ ಬೀರಲದಿನ್ನಿ ಗ್ರಾಮಕ್ಕೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ವಿಶೇಷಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಜ. ೩೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕೊಪ್ಪಳ ತಾಲೂಕು ಹಾಸಗಲ್ ಗ್ರಾಮಕ್ಕೆ ಭೇಟಿ ನೀಡಿ ಕೃಷಿ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ರೈತರೊಂದಿಗೆ ಸಂವಾದ ನಡೆಸುವರು.   ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೊಪ್ಪಳದ ಜಂಟಿಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave a Reply