ಜು.೧೧ ರಂದು ಜಿ.ಪಂ. ಕೆ.ಡಿ.ಪಿ ಸಭೆ

  ಕೊಪ್ಪಳ ಜಿಲ್ಲಾ ಪಂಚಾಯತ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಜು. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ವಹಿಸುವರು.  ಅದೇ ದಿನ ಬೆಳಿಗ್ಗೆ ೧೦-೩೦ ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುವುದು.  ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವಂತೆ ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ತಿಳಿಸಿದ್ದಾರೆ.

Related posts

Leave a Comment