ಕಡ್ಡಾಯ ಶಿಕ್ಷಣ ಕಾಯ್ದೆ : ಜಿಲ್ಲೆಯ ಪ್ರಾಥಮಿಕ ಶಾಲೆಗಳ ಪಟ್ಟಿ ಪ್ರಕಟ

ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯು ಏಪ್ರಿಲ್ ೦೧ ರಿಂದ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ, ಕಾಯ್ದೆಯನ್ವಯ ಕೊಪ್ಪಳ ಜಿಲ್ಲೆಗೆ ಸಂಬಂಧಪಟ್ಟ ನೆರೆ ಹೊರೆ ಪ್ರದೇಶಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಜನವಸತಿ ಪ್ರದೇಶಗಳವಾರು ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳ ಪಟ್ಟಿಯನ್ನು ತಯಾರಿಸಿ ಸಾರ್ವಜನಿಕರ ಮಾಹಿತಿಗಾಗಿ www.koppal.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.


Please follow and like us:
error