ಬೀದಿನಾಟಕ ಮತ್ತು ಜಾನಪದ ಕಲಾ ತಂಡಗಳ ಆಯ್ಕೆ.

ಕೊಪ್ಪಳ ಜೂ. ೨೨ (ಕರ್ನಾಟಕ ವಾರ್ತೆ): ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಬೀದಿ ನಾಟಕ ಮತ್ತು ಜಾನಪದ ಸಂಗೀತದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ಸೋಮವಾರದಂದು ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ಜರುಗಿತು. ಕಲಾ ತಂಡಗಳ ಆಯ್ಕೆ ಸಮಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ ಬಾಸೂರ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕೃಷಿ ಇಲಾಖೆ ಅಧಿಕಾರಿ ಬಸವರಾಜ್ ಇದ್ದರು.  ತಾಲೂಕು ವೈದ್ಯಾಧಿಕಾರಿ ಡಾ. ದಾನರೆಡ್ಡಿ ಉಪಸ್ಥಿತರಿದ್ದರು.  ಜಿಲ್ಲೆಯ ವಿವಿಧೆಡೆಗಳಿಂದ ೦೬ ಬೀದಿ ನಾಟಕ ತಂಡಗಳು ಮತ್ತು ೦೬ ಜಾನಪದ ಸಂಗೀತ ಕಲಾ ತಂಡಗಳು ಆಯ್ಕೆ ಸ್ಪರ್ಧೆಯಲ್ಲಿದ್ದವು.

Please follow and like us:
error