ಜ.೦೭ ರಂದು ನೂತನ ಕಟ್ಟಡದ ಉದ್ಘಾಟನಾ ಸಮಾರಂಭ.

ಕೊಪ್ಪಳ, ಜ.೦೬ (ಕ ವಾ)  ಕೊಪ್ಪಳ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕು ದೋಟಿಹಾಳ ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ.೦೭ ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಉದ್ಘಾಟನೆ ನೆರವೇರಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ್ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ರಾಘವೇಂದ್ರ ಹಿಟ್ನಾಳ್, ಬಸವರಾಜ್ ಪಾಟೀಲ್ ಇಟಗಿ, ಅಮರನಾಥ್ ಪಾಟೀಲ್, ಶರಣಪ್ಪ ಮಟ್ಟೂರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ ಸಾಲೋಣಿ, ಸದಸ್ಯರಾದ ಹನುಮಕ್ಕ ಚೌಡ್ಕಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಸುವರ್ಣ ತುರಾಯಿ, ಉಪಾಧ್ಯಕ್ಷ ಶರಣಮ್ಮ ಅಂಗಡಿ,  ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಮ್ಮ ಹುಬ್ಬಳ್ಳಿ, ಉಪಾಧ್ಯಕ್ಷೆ ಅಂಬಮ್ಮ ಸಣ್ನೆಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಶ್ರೀಕಾಂತ ಬಾಸೂರು ಅವರು   ತಿಳಿಸಿದ್ದಾರೆ.
ಆಮಂತ್ರಣ ಪತ್ರಿಕೆ ಕಳುಹಿಸಿದೆಕಾನೂನು ಪದವಿಧರರಿಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನ.
ಕೊಪ್ಪಳ, ಜ.೦೬ (ಕ ವಾ)  ಕಾನೂನು ಇಲಾಖೆ ವತಿಯಿಂದ ೨೦೧೪-೧೫ನೇ ಸಾಲಿಗೆ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಕೊಪ್ಪಳ ತಾಲೂಕಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಕಾನೂನು ಇಲಾಖೆ ವತಿಯಿಂದ ೨೦೧೪-೧೫ನೇ ಸಾಲಿಗೆ ಪರಿಶಿಷ್ಟ ಜಾತಿ, ಪ.ವರ್ಗದವರನ್ನು ಹೊರತುಪಡಿಸಿ, ಇತರೆ ಎಲ್ಲಾ ವರ್ಗದ ಪುರುಷ ಹಾಗೂ ಮಹಿಳಾ ಕಾನೂನು ಪದವೀಧರರಿಗೆ ತಿಂಗಳಿಗೆ ೧,೦೦೦ ರೂ.ಗಳಂತೆ ೨೪ ತಿಂಗಳಿಗೆ ಸೀಮಿತಗೊಳಿಸಿ, ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗುತ್ತದೆ. ಈಗಾಗಲೇ ಪ್ರೋತ್ಸಾಹಧನವನ್ನು ಪಡೆದ ಕಾನೂನು ಪದವಿಧರರನ್ನು ಹೊರತುಪಡಿಸಿ, ಹೊಸದಾಗಿ ಜಿಲ್ಲಾ ವಕೀಲರ ಸಂಘದಲ್ಲಿ ನೋಂದಾಯಿಸಲ್ಪಟ್ಟ ಹಾಗೂ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ೨೦೧೨ ಏಪ್ರಿಲ್ ೦೧ ಹಾಗೂ ತದನಂತರ ನೋಂದಾಯಿಸಿದ ಕಾನೂನು ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.  ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಕಾನೂನು ಪದವಿಗೆ ಸಂಬಂಧಿಸಿದ ದಾಖಲೆಗಳು, ರಾಜ್ಯ ಬಾರ್ ಕೌನ್ಸಿಲ್ ಹಾಗೂ ಜಿಲ್ಲಾ ವಕೀಲರ ಸಂಘದಲ್ಲಿ ನೋಂದಾಯಿಸಿದ ಪ್ರಮಾಣ ಪತ್ರ, ಹಾಗೂ ಪೂರಕ ದಾಖಲೆಗಳನ್ನು ಲಗತ್ತಿಸಿ ಅಧ್ಯಕ್ಷರು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಹಾಗೂ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರಿಗೆ ಜ. ೧೮ ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿತಿಳಿಸಿದೆ.
Please follow and like us:
error