ರಕ್ತದಾನ ಶಿಬಿರ.

ಕೊಪ್ಪಳ.08- ಬುಧವಾರದಂದು ಗಂಗಾವತಿ ತಾಲೂಕಿನ ಬೆನ್ನೂರು ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
     ಗಂಗಾವತಿ ತಾಲೂಕಿನ ಬೆನ್ನೂರು ಗ್ರಾಮದ ಕಲ್ಲೇಶ್ವರ ಸಮುದಾಯ ಭವನದಲ್ಲಿ ದಿನಾಂಕ ೦೯/೧೨/೨೦೧೫ ಬೆಳಿಗ್ಗೆ ೦೮:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

Leave a Comment