fbpx

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ತಾತ್ಕಾಲಿಕ ಆದ್ಯತಾ ಪಟ್ಟಿ ಪ್ರಕಟ.

ಕೊಪ್ಪಳ ಆ. ೦೬ ಪ್ರಸಕ್ತ ಸಾಲಿನ ಕಲಬುರಗಿ ವಿಭಾಗದ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ಸಂಬಂಧಿಸಿದ ಅಂತಿಮ ತಾತ್ಕಾಲಿಕ ಆದ್ಯತಾ ಪಟ್ಟಿ ಹಾಗೂ ಖಾಲಿ ಹುದ್ದೆಗಳ ಮಾಹಿತಿಯನ್ನು
http://cpigulbarga.kar.nic.in ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.
    ಆಗಸ್ಟ್ ೧೦ ರಂದು ಅಂತಿಮ ತಾತ್ಕಾಲಿಕ ಆದ್ಯತಾ ಪಟ್ಟಿಯಲ್ಲಿರುವ ಕ್ರಮ ಸಂಖ್ಯೆ: ೦೧ ರಿಂದ ೫೫ ರವರೆಗಿನ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ಹಾಗೂ ಕ್ರಮ ಸಂಖ್ಯೆ: ೦೧ ಮತ್ತು ೦೨ ರವರೆಗಿನ ತಾಲೂಕಾ ದೈಹಿಕ ಶಿಕ್ಷಣಾಧಿಕಾರಿಗಳ ಕೌನ್ಸಲಿಂಗ್. ಆ. ೧೧ ರಂದು ಅಂತಿಮ ತಾತ್ಕಾಲಿಕ ಪಟ್ಟಿಯಲ್ಲಿರುವ ಕ್ರಮ ಸಂಖ್ಯೆ: ೫೬ ರಿಂದ ಅಂತಿಮ ಆದ್ಯತಾ ಸಂಖ್ಯೆ ಮುಗಿಯುವವರೆಗೆ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ವರ್ಗಾವಣೆ ಕೌನ್ಸಲಿಂಗ ಅಪರ ಆಯುಕ್ತರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಇಲ್ಲಿ ನಡೆಸಲಾಗುವುದು. ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರ (ಟಿ.ಟಿ.ಐ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರ (ಡಯಟ್) ಹಾಗೂ ಉಪ ನಿರ್ದೇಶಕರ ಕಛೇರಿಯಲ್ಲಿಯ ವಿಷಯ ಪರಿವೀಕ್ಷಕರ ಖಾಲಿ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುವವರು ಸ್ನಾತಕೋತ್ತರ ಪದವಿಯ ದೃಢೀಕೃತ ಅಂಕಪಟ್ಟಿಯನ್ನು ಕಡ್ಡಾಯವಾಗಿ ಕೌನ್ಸಲಿಂಗ್ ಸಂದರ್ಭದಲ್ಲಿ ಸಲ್ಲಿಸಬೇಕು.
    ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ಅಂತರ್ ಘಟಕ ವರ್ಗಾವಣೆ ಕೌನ್ಸಲಿಂಗ ಆಗಸ್ಟ್ ೧೪ ರಂದು ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಅಪರ ಆಯುಕ್ತರ ಕಚೇರಿ ತಿಳಿಸಿದೆ.

Please follow and like us:
error

Leave a Reply

error: Content is protected !!