fbpx

ಗಮನಸೆಳೆದ ಛಾಯಾಚಿತ್ರ ಪ್ರದರ್ಶನ

  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಂಗವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ ನೋಡುಗರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.
  ಕೊಪ್ಪಳದ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಕಚೇರಿಯಲ್ಲಿ ಸಹಾಯಕ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಮರದೀಪ್ ಅವರು ತಮ್ಮ ಸರ್ಕಾರಿ ಕರ್ತ

ವ್ಯದ ಜೊತೆಗೆ, ಫೋಟೋಗ್ರಫಿ ಚಟುವಟಿಕೆಯನ್ನು ಮೈಗೂಡಿಸಿಕೊಂಡಿದ್ದು, ಕೊಪ್ಪಳದ ಗವಿಮಠ, ಹುಲಿಕೆರೆ ನಂತಹ ಭವ್ಯ ತಾಣಗಳಲ್ಲಿ ತಮ್ಮ ಕ್ಯಾಮೆರಾ ಮೂಲಕ ಸೆರೆಹಿಡಿದ ಸುಂದರ ಹಾಗೂ ಅಪರೂಪದ ಫೋಟೋಗಳ ಪ್ರದರ್ಶನವನ್ನು ನೌಕರರ ಕ್ರೀಡಾಕೂಟದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದರು.   ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ನಗರಸ

ಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ್, ಉಪಾಧ್ಯಕ್ಷ ಅಮ್ಜದ್ ಪಟೇಲ್, ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಮುಂತಾದ ಗಣ್ಯರು ಛಾಯಾಚಿತ್ರ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನೌಕರರು ಇಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಆಶಯ ನುಡಿಗಳನ್ನಾಡಿದರು.

Please follow and like us:
error

Leave a Reply

error: Content is protected !!