ಬಳ್ಳಾರಿ ವಿವಿಯಲ್ಲಿ ನಾಳೆ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರೊಂದಿಗೆ ಸಂವಾದ

 ಪ್ರಸಿದ್ಧ ಕವಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ ನ. ೧೪ ರಂದು ಶುಕ್ರವಾರ ಬೆಳಿಗ್ಗೆ ೧೦-೩೦ ಗಂಟೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಹಾಗೂ ಸಂಸ್ಕೃತಿ ಪ್ರಕಾಶನದ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವಿಯ ಪ್ರಭಾರಿ ಕುಲಪತಿ ಫ್ರೊ. ಜೆ ಸೋಮಶೇಖರ್ ಅವರು ವಹಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿಯ ಪ್ರಾಧ್ಯಾಪಕ, ಚಿಂತಕ ಡಾ. ಜೊಗೇನ್ ಶಂಕರ್, ಕುಲಸಚಿವರಾದ ಫ್ರೊ. ಕೆ. ವಿಜಯಕುಮಾರ್, ಫ್ರೊ. ಎಲ್ ಆರ್ ನಾಯ್ಕ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ರಂಗ ಕಲಾವಿದೆ ಕೂಡ್ಲಿಗಿಯ ಬಿ ಶಿವಕುಮಾರಿ, ಲೊಹಿಯಾ ಪ್ರಕಾಶನದ ಸಿ. ಚನ್ನಬಸವಣ್ಣ, ಗುಲ್ಬರ್ಗಾ ವಿವಿಯ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮತ್ತು ಬಿ ಶಿವಕುಮಾರಿ ಅವರನ್ನು ಸಂಸ್ಕೃತಿ ಪ್ರಕಾಶನದ ಪರವಾಗಿ ಸತ್ಕರಿಸಿ ಗೌರವಿಸಲಾಗುವುದು .
Please follow and like us:

Related posts

Leave a Comment