ಸೆ.೧೪ ರಂದು ಗಂಗಾವತಿಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ.

ಕೊಪ್ಪಳ, ಸೆ.೧೧ (ಕ ವಾ) ಜಿಲ್ಲಾ ಪಂಚಾಯತ್, ಕೊಪ್ಪಳ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಕೊಪ್ಪಳ ಜಿಲ್ಲಾ ಮಟ್ಟದ ಹಾಗೂ ಗಂಗಾವತಿ ತಾಲೂಕಾ ಮಟ್ಟದ ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು  ಸೆ.೧೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
     ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಹಾಗೂ ಸಂಸ್ಥಾನ ಬೃಹನ್ಮಠ, ಗಂಗಾವತಿಯ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಕೆ.ರಾಘವೇಂದ್ರ ಹಿಟ್ನಾಳ್, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ನಾಗಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಮಿತಿ ಅಧ್ಯಕ್ಷ ವೀರೇಶ ನಾಗಪ್ಪ ಸಾಲೋಣಿ, ಗಂಗಾವತಿ ನಗರಸಭೆ ಅಧ್ಯಕ್ಷ ಕೆ.ವೆಂಕಟೇಶ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹನುಮಂತಪ್ಪ ನಾಯಕ, ತಾಲೂಕಾ ಪಂಚಾಯತ್ ಅಧ್ಯಕ್ಷೆ ವೀರಮ್ಮ ಮುದಿಯಪ್ಪ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ, ಜಿಲ್ಲಾಧಿಕಾರಿ ರಮಣದೀಪ್ ಚೌದರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ||ತ್ಯಾಗರಾಜನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ್, ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಬಾಗಲಕೋಟೆಯ ವಿಶ್ರಾಂತ ಉಪನ್ಯಾಸಕ ಎನ್.ಬಿ. ಚಿತ್ರಗಾರ ಅವರು ವಿಶೇಷ ಉಪನ್ಯಾಸ ನೀಡುವರು.
     ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಗ್ಗೆ ೦೮ ಗಂಟೆಗೆ ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ, ಗಾಂಧಿ ಸರ್ಕಲ್ ಮೂಲಕ ಸಿ.ಬಿ.ಎಸ್ ಕಲ್ಯಾಣ ಮಂಟಪದ ವರೆಗೆ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಹಾಗೂ ಮಧ್ಯಾಹ್ನ ೦೩ ಗಂಟೆಗೆ ಶಿಕ್ಷಕರ ಕಲಾ ವೃಂದ, ಕೊಪ್ಪಳ ಇವರಿಂದ ಕವಿಗೋಷ್ಠಿ ನಡೆಯಲಿದೆ.

Related posts

Leave a Comment