fbpx

ಕೊಪ್ಪಳ : ಮಾ. ೨೭ ರಂದು ಲಾಟರಿ ಮೂಲಕ ಕೃಷಿ ಭಾಗ್ಯ ಫಲಾನುಭವಿಗಳ ಆಯ್ಕೆ

ಕೊಪ್ಪಳ ಮಾ. ೨೬: ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳನ್ನು ಮಾ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ.
  ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ೨೦೧೪-೧೫ ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೊಪ್ಪಳ ತಾಲ್ಲೂಕಿನ ರೈತರಿಗೆ ಸಹಾಯಧನ ನೀಡುವ ಕುರಿತಂತೆ ರೈತರಿಂದ ಅರ್ಜಿ ಸ್ವೀಕರಿಸುವ ಕಾರ್ಯ ಈಗಾಗಲೆ ಮುಕ್ತಾಯಗೊಂಡಿದ್ದು, ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿರುತ್ತವೆ. ಈಗಾಗಲೇ ಮೊದಲನೆ ಹಂತದ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು. ೨೦೧೫-೧೬ ಸಾಲಿಗಾಗಿ ಮಾರ್ಗಸೂಚಿಗಳನ್ವಯ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕಾಗಿರುತ್ತದೆ.  ಲಾಟರಿ ಪ್ರಕ್ರಿಯೆಯನ್ನು ಕೊಪ್ಪಳ ಶಾಸಕರು ಮತ್ತು ಇತರೆ ಜನಪ್ರತಿನಿಧಿಗಳು ಹಾಗೂ ರೈತರ ಸಮುಖದಲ್ಲಿ ಮಾ. ೨೭ ರಂದು ಶುಕ್ರವಾರ ಬೆಳಗ್ಗೆ ೧೦ ಗಂಟೆಗೆ ಕೊಪ್ಪಳ ತಾಲೂಕಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾಗಿದೆ. ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!