ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದ್ವಿತೀಯ ಸ್ಥಾನ.

ಕೊಪ್ಪಳ – ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ  ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಹೊಸಪೇಟೆಯಲ್ಲಿ ಇತ್ತೀಚಿಗೆ  ಅಂತರ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾವಳಿಗಳು ಜರುಗಿದವು. ಈ ಕ್ರೀಡಾಕೂಟದಲ್ಲಿ ಒಂಬತ್ತು ತಂಡಗಳು ಭಾಗವಹಿಸಿದ್ದವು. ಇವುಗಳಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಮಹಿಳಾ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ  ಪಡೆದಿರುತ್ತಾರೆ. ದೈಹಿಕ ಶಿಕ್ಷಣ ನಿದೇಶಕರಾದ ಶೋಭಾ ಕೆ.ಎಸ್  ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಪ್ರಾಚಾರ್ಯ ಶಿವಪ್ಪ ಸಾಂತಪ್ಪನವರು ಹಾಗೂ ಶಿಕ್ಷಕ, ಶಿಕ್ಷಕೇತರ ಬಳಗ ಹರ್ಷವ್ಯಕ್ತಪಡಿಸಿದ್ದಾರೆ.

Please follow and like us:
error