ಮಕ್ಕಳ ರಕ್ಷಣಾ ಕಾಯ್ದೆ-೨೦೧೨ (ಪೋಕ್ಸೋ) ಕುರಿತು ಒಂದು ದಿನದ ಕಾರ್ಯಾಗಾರ

ಕೊಪ್ಪಳ, ಫೆ. : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣಾ ಕಾಯ್ದೆ-೨೦೧೨ (ಪೋಕ್ಸೋ) ಬಗ್ಗೆ ಒಂದು ದಿನದ ಕಾರ್ಯಾಗಾರ ಫೆ.೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಮ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. 
  ಕೊಪ್ಪಳದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಬಿ ದಶರಥ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ||ಪಿ.ರಾಜಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಶ್ಯಾಮಸುಂದರ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ ತುಕಾರಾಮರಾವ್, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶುಭಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 
  ಮಕ್ಕಳ ವಿಶೇಷ ಘಟಕದ ಜಿಲ್ಲಾ ಪೋಲೀಸ್ ತರಬೇತುದಾರ ಸೋಮಶೇಖರ-ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ -೨೦೧೨ ಬಗ್ಗೆ ಹಾಗೂ ವಕೀಲ ಹನುಮಂತರಾವ್-ಪೋಕ್ಸೋ ಕಾಯ್ದೆ-೨೦೧೨ ಅಡಿ ಕಾನೂನಿನೊಂದಿಗೆ ಸಂಪರ್ಕ ಹಾಗೂ ಸಂಘರ್ಷಕ್ಕೊಳಗಾದ ಮಕ್ಕಳ ಪ್ರಕರಣಗಳ ಕುರಿತು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುನಿರಾಜಪ್ಪ-ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯವೈಖರಿ ಕುರಿತು ಹಾಗೂ ಯುನಿಸೆಫ್ ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಮಕ್ಕಳ ಸಂರಕ್ಷಣಾ ಯೋಜನೆಯ ಯಶೋಗಾಥೆಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.          
Please follow and like us:
error