fbpx

ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರವೀಣ್ ಕುಮಾರ್.

ಕೊಪ್ಪಳ ಆ. ೨೬ (ಕ ವಾ) ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರವೀಣ್‌ಕುಮಾರ್ ಜಿ.ಎಲ್. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ. ಸುರೇಶ್ ಇಟ್ನಾಳ್ ಅವರು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಕೊಪ್ಪಳ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿಯನ್ನಾಗಿ ಡಾ. ಪ್ರವೀಣ್‌ಕುಮಾರ್ ಜಿ.ಎಲ್. ಅವರನ್ನು ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.  ಡಾ. ಪ್ರವೀಣ್‌ಕುಮಾರ್ ಅವರು ಈ ಹಿಂದೆ ಗದಗ ಮತ್ತು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು  ಕೊಪ್ಪಳಕ್ಕೆ ವರ್ಗವಾಗುವ ಪೂರ್ವದಲ್ಲಿ ಬೆಳಗಾವಿ ಜಿಲ್ಲೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Please follow and like us:
error

Leave a Reply

error: Content is protected !!