ಗೌಳಿ ಮಹಾದೇವಪ್ಪ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಸಂತಾಪ.

ಕೊಪ್ಪಳ ಸೆ. ೦೧ ಗಂಗಾವತಿ ಮಾಜಿ ಶಾಸಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದಿ: ಗೌಳಿ ಮಹಾದೇವಪ್ಪ ಅವರ ನಿಧನಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
     ಗೌಳಿ ಮಹಾದೇವಪ್ಪ ನವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಮಾಜಿ ಶಾಸಕರಾಗಿ, ನಗರಸಭೆ ಸದಸ್ಯರಾಗಿ ಗಂಗಾವತಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ.  ಸರಳ ಸಜ್ಜನಿಕೆ, ಧೀಮಂತ ನಾಯಕರಾಗಿ ಎಲ್ಲ ವರ್ಗದವರೊಡನೆ ಬೆರೆತು ಒಗ್ಗೂಡಿಸಿಕೊಂಡು, ಗಂಗಾವತಿಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು.  ಹೈ-ಕ ವಿಮೋಚನಾ ಚಳುವಳಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದರು.  ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು, ಶಾಸಕರಾಗಿದ್ದ ಅವಧಿಯಲ್ಲಿ ಶಿಕ್ಷಣ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರು.
Please follow and like us:
error