ಜೇನುಗಾರಿಕೆ ತರಬೇತಿ ಶಿಬಿರ ಅರ್ಜಿ ಆಹ್ವಾನ.

ಕೊಪ್ಪಳ, ಸೆ.೨೪ (ಕ ವಾ)  ತೋಟಗಾರಿಕೆ ಇಲಾಖೆ ವತಿಯಿಂದ ಭಾಗಮಂಡಲದ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಮೂರು ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ತರಬೇತಿಯು ಪ್ರಸಕ್ತ ಅಕ್ಟೋಬರ್.೦೧ ರಿಂದ ಡಿಸೆಂಬರ್.೩೧ ರವರೆಗೆ ಒಟ್ಟು ಮೂರು ತಿಂಗಳ ಕಾಲ ನಡೆಯಲಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ೧೮ ರಿಂದ ೩೦ ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಯ ಸಂಬಂಧದ ಕುರಿತು ಗ್ರಾಮ ಲೆಕ್ಕಾಧಿಕಾರಿಗಳಿಂದ ವಂಶ ವೃಕ್ಷ ದೃಢೀಕರಣ ಪತ್ರ ನೀಡಬೇಕು. ಅಲ್ಲದೆ ಆಯ್ಕೆಯಾದ ಅಭ್ಯರ್ಥಿಯು ೫೦೦ ರೂ.ಗಳನ್ನು ಭದ್ರತಾ ಠೇವಣಿಯಾಗಿ ಇಡಬೇಕು.
     ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವಾಗ ಅರ್ಜಿ ಶುಲ್ಕದ ಬಾಬ್ತು ರೂ.೨೦ ಗಳನ್ನು ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ರೂಪದಲ್ಲಿ ತೋಟಗಾರಿಕೆ ಉಪನಿರ್ದೇಶಕರು, ಕೊಪ್ಪಳ ರವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆ.೨೮ ರಂದು ತೋಟಗಾರಿಕಾ ಉಪನಿರ್ದೇಶಕರ ಕಛೇರಿ, ಕೊಪ್ಪಳದಲ್ಲಿ ಹಾಜರಾಗಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪ ನಿರ್ದೇಶಕರು, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಇಲಾಖೆಯ ವೆಬ್‌ಸೈಟ್
www.horticulture.kar.nic.inನಲ್ಲಿ ಪಡೆಯಬಹುದಾಗಿದೆ.

Leave a Reply