ರೈಸ್ ಟೆಕ್ನಾಲಜಿ ಪಾರ್ಕ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಕೊಪ್ಪಳ,   : ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿಯ ಭತ್ತ ಮತ್ತು ಅಕ್ಕಿ ಉತ್ಪನ್ನಗಳ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇವರಿಂದ ನವಲಿ-ಸೋಮನಾಳ ಗ್ರಾಮಗಳ ಬಳಿ ನಿರ್ಮಾಣವಾಗುತ್ತಿರುವ ರೈಸ್ ಟೆಕ್ನಾಲಜಿ ಪಾರ್ಕ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಸಮಾರಂಭ ಏ.೧೧ ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
  ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಾಮನೂರು ಶಿವಶಂಕರಪ್ಪ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ   ಶಿವರಾಜ ತಂಗಡಗಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ವಿಧಾನಪರಿಷತ್ ಸದಸ್ಯರಾದ ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಆರೋಗ್ಯ  ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿರೇಶ್ ಸಾಲೋಣಿ, ಗಂಗಾವತಿ ತಾಲೂಕಾ ಪಂಚಾಯಿತಿ ಅಧ್ಯಕ್ಷೆ ಈರಮ್ಮ ಮುದಿಯಪ್ಪ, ಉಪಾಧ್ಯಕ್ಷ ಶರಣಪ್ಪ ಸಾಹುಕಾರ, ನವಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮರಿರಾಜು ಭಜಂತ್ರಿ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್, ಕೃಷಿ ಮಾರಾಟ ಇಲಾಖೆಯ ನಿರ್ದೇಶಕ ಡಾ||ಮುದ್ದು ಮೋಹನ್, ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಪ್ಪ ಗುಂಜಳ್ಳಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜ್ಯೋತಿ ಎನ್.ಬಿಲ್ಗಾರ್, ಹೇಮಾವತಿ ಗುಳದಾಳ, ವೀರೇಶ ಸಮಗಂಡಿ, ತಾಲೂಕಾ ಪಂಚಾಯಿತಿ ಸದಸ್ಯರಾದ ಜೂಲೆಪ್ಪ ನಾಯ್ಕ, ಸಿದ್ದಪ್ಪ ಭೋವಿ, ಗಂಗಮ್ಮ ಎಸ್.ಹಿರೇಮಠ, ಹಿರೇಬಸಪ್ಪ ಸಜ್ಜನ್, ಹಿರೇ ಹನುಮಂತಪ್ಪ ಡಂಬರ, ವಿಜಯಲಕ್ಷ್ಮೀ ನಾಗೇಶ್ವರರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಬಿ.ಶರಣಯ್ಯ ಸ್ವಾಮಿ, ಸಂಜೀವಮ್ಮ ಭೋವಿ, ಗೌರಮ್ಮ ತಳವಾರ, ಸರಸಮ್ಮ ಭೋವಿ, ಆದೆಪ್ಪ ಉಪ್ಪಾರ, ಶರಣಪ್ಪ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಭತ್ತ ಮತ್ತು ಅಕ್ಕಿ ಉತ್ಪನ್ನಗಳ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಡಾ. ಜಿ. ಶರಶ್ಚಂದ್ರ ರಾನಡೆ ಅವರು ತಿಳಿಸಿದ್ದಾರೆ.

Leave a Reply