ಮಾಧ್ಯಮದವರ ಮೇಲೆ ಹಲ್ಲೆ ಖಂಡನೆ

ಕೊಪ್ಪಳ : ಬಳ್ಳಾರಿಯಲ್ಲಿ ಗಡಿ ಸರ್ವೆ ಕಾರ್ಯದ ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂದಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಪದೇ ಪದೇ ಪತ್ರಕರ್ತರ ಮೇಲೆ ಹಲ್ಲೆ ನಡೆಯುತ್ತಿದ್ದು ಸರಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಕೈಗೊಂಡು ದುಷ್ಕರ್ಮಿಗಳಿಗೆ ಶಿಕ್ಷೆ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಮನವಿಯನ್ನು ಸರಕಾರಕ್ಕೆ ಕಳಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಭೀಮರಾಯ ಹದ್ದಿನಾಳ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರಾದ ಹರೀಶ್ ಎಚ್.ಎಸ್. ಪತ್ರಕರ್ತರಾದ ಎನ್.ಎನ್.ಪ್ಯಾಟಿ, ಬೀಮಸೇನ ಚಳಗೇರಿ, ಸೋಮರಡ್ಡಿ ಅಳವಂಡಿ, ಗಂಗಾಧರ ಬಂಡಿಹಾಳ ಮತ್ತಿತರರು ಉಪಸ್ಥಿತರಿದ್ದರು.

Leave a Reply