ಸೆ. ೨೨ ರಂದು ರಾಜ್ಯ ಚುನಾವಣಾಧಿಕಾರಿಯಿಂದ ಪರಿಶೀಲನೆ

ಕೊಪ್ಪಳ ಸೆ. ೨೧ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಿ.ಎಸ್. ಸುರಂಜನ್ ಅವರು ಸೆ. ೨೨  ರಂದು ಕೊಪ್ಪಳ ನಗರಕ್ಕೆ ಆಗಮಿಸಿ ಬೆಳಿಗ್ಗೆ ೧೧-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಣದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸಿದ್ಧತೆ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ.
  ಚುನಾವಣಾ ಸಿದ್ಧತೆಯ ಕುರಿತಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆಯಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಉಪಚುನಾವಣೆ : ರಾಜ್ಯ ಚುನಾವಣಾಧಿಕಾರಿಯಿಂದ ವಿವಿಧ ರಾಜಕೀಯ ಪಕ್ಷಗಳ ಸಭೆ
ಕೊಪ್ಪಳ ಸೆ. : ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಿ.ಎಸ್. ಸುರಂಜನ್ ಅವರು ಸೆ. ೨೨ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ಏರ್ಪಡಿಸಿದ್ದು, ಸಭೆಯಲ್ಲಿ ರಾಜಕೀಯ ಪಕ್ಷಗಳ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರು / ಕಾರ್ಯದರ್ಶಿಗಳು ಪಾಲ್ಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

Leave a Reply