ಪೊಲೀಸ್ ನೇಮಕಾತಿ : ವದಂತಿಗಳಿಗೆ ಕಿವಿಗೊಡದಿರಲು ಸೂಚನೆ

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನ. ೧೬ ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಯಲಿದೆ.  ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಸುಳ್ಳು ಭರವಸೆಗಳಿಗೆ ಅಥವಾ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್ ಅವರು ಮನವಿ ಮಾಡಿದ್ದಾರೆ.

  ನಾಗರಿಕ/ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನ. ೧೬ ರಂದು ಲಿಖಿತ ಪರೀಕ್ಷೆ ನಡೆಯಲಿದೆ.  ಪೊಲೀಸ್ ನೇಮಕಾತಿಯು ಸಂಪೂರ್ಣ ಪಾರದರ್ಶಕ, ಗಣಕೀಕೃತ, ವಸ್ತುನಿಷ್ಠ ಹಾಗೂ ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ.  ಅಭ್ಯರ್ಥಿಗಳು ಉದ್ಯೋಗ ಪಡೆಯುವ ಸಲುವಾಗಿ, ಇಲಾಖೆಯ ಹೊರಗೆ ಅಥವಾ ಒಳಗೆ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ಕಾಣಿಕೆ/ಪಾರಿತೋಷಕ ನೀಡುವುದಾಗಲಿ ಮಾಡಬಾರದು.  ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ.  ಈ ದಿಸೆಯಲ್ಲಿ ಅಭ್ಯರ್ಥಿಗಳು ಮಧ್ಯವರ್ತಿಗಳ ಸುಳ್ಳು ಭರವಸೆಗಳಿಗೆ ಮಾರು ಹೋಗಬಾರದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್  ಎಚ್ಚರಿಕೆ ನೀಡಿದ್ದಾರೆ.

Leave a Reply