ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ.

ಕೊಪ್ಪಳ, ಏ.೨  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಿಂದ ೨೦೧೫-೧೬ ನೇ ಸಾಲಿನಲ್ಲಿ ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಕೊಡಮಾಡುವ ಹೊಯ್ಸಳ/ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ ಮಕ್ಕಳಿಗೆ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ವಿತರಣೆ ಮಾಡಿದರು.
      ಜಿ.ಪಂ ಕಾರ್ಯನಿರ್ವಾಹಕಾಧಿಕಾರಿ ಆರ್.ರಾಮಚಂದ್ರನ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಪ್ರಶಸ್ತಿ ಪುರಸ್ಕೃತ ಮಕ್ಕಳನ್ನು ಅಭಿನಂದಿಸಿ, ಪ್ರಶಸ್ತಿ ಪತ್ರ ಹಾಗೂ ರೂ.೧೦,೦೦೦ ಗಳ ಚೆಕ್ ನೀಡಿ
ಗೌರವಿಸಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕಲಾದಗಿ
ಉಪಸ್ಥಿತರಿದ್ದರು.

Please follow and like us:
error