ತುಂಗಭದ್ರಾ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರಿಲ್ಲ.

ಕೊಪ್ಪಳ, ಡಿ.೩೦ (ಕ ವಾ)  ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿರುವುದರಿಂದ ಹಿಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರು ಹರಿಸಲಾಗುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎರಡನೇ ಕಾಲುವೆ ವಿಭಾಗ ವಡ್ಡರಹಟ್ಟಿ ಕ್ಯಾಂಪ್, ಕಾರ್ಯಪಾಲಕ ಅಭಿಯಂತರ ರಮೇಶ ಎಸ್.ವಲ್ಯಾಪುರ ಅವರು ತಿಳಿಸಿದ್ದಾರೆ.
     ಬೆಂಗಳೂರಿನ ವಿಕಾಸ ಸೌಧದಲ್ಲಿ ನ.೧೬ ರಂದು ರಂದು ನಡೆದ ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ೧೦೨ನೇ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣವು ಕಡಿಮೆ ಆಗಿರುವುದರಿಂದ ೨೦೧೬ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರು ಹರಿಸಲಾಗುವುದಿಲ್ಲ ಹಾಗೂ ಲಭ್ಯವಾಗುವ ನೀರಿನ ಪ್ರಮಾಣ ಆಧರಿಸಿ ಕುಡಿಯುವ ನೀರನ್ನು ಕಾಯ್ದಿರಿಸಿ, ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎರಡನೇ ಕಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರ ರಮೇಶ ಎಸ್.ವಲ್ಯಾಪುರ ಅವರು ರೈತ ಬಾಂಧವರಲ್ಲಿ ವಿನಂತಿ ಮಾಡಿದ್ದಾರೆ.

Related posts

Leave a Comment