ವಿದ್ಯಾರ್ಥಿ ವೇತನ : ಆನ್‌ಲೈನ್ ಅರ್ಜಿ ಸಲ್ಲಿಸಲು ಡಿ.೧೫ ಕೊನೆಯ ದಿನ

ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿ.೧೫ ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಹೆಚ್. ಅಂಗಡಿ ಅವರು ತಿಳಿಸಿದ್ದಾರೆ.
೨೦೧೨-೧೩ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ೧ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಮೆಟ್ರಕ್ ಪೂರ್ವ ವಿದ್ಯಾರ್ಥಿ ವೇತನ ನೀಡಲು ಕ್ರಮ ವಹಿಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. (ವಸತಿ ನಿಲಯದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಿರುವುದಿಲ್ಲ), ವಿದ್ಯಾರ್ಥಿ ವೇತನವನ್ನು ಜಮೆ ಮಾಡಲು ವಿದ್ಯಾರ್ಥಿ/ಪೋಷಕರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆಯನ್ನು ಹೊಂದಿರತಕ್ಕದ್ದು. ಒಂದು ವೇಳೆ ಖಾತೆ ಹೊಂದಿಲ್ಲದಿದ್ದಲ್ಲಿ ಯಾವುದೇ ಮೊತ್ತ ಪಾವತಿಸದೇ No frill Account ತೆರೆಯತಕ್ಕದ್ದು, ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿರುವ ಖಾತೆಗೂ ಸಹ ಅವಕಾಶವಿರುತ್ತದೆ, ವಿದ್ಯಾರ್ಥಿಯು ಅರ್ಜಿ ಸಲ್ಲಿಸುವ ಮೊದಲು ತಹಶೀಲ್ದಾರರಿಂದ ದೃಢೀಕರಿಸಿದ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು, ನಿಗದಿತ ಕೊನೆಯ ಡಿ.೧೫ ರ ನಂತರ ಆನ್‌ಲೈನ್ ಅರ್ಜಿ ವ್ಯವಸ್ಥೆ ಲಾಕ್ ಆಗುವುದರಿಂದ, ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೇ, ಆದಷ್ಟು ಶೀಘ್ರ ಅರ್ಜಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ .

Leave a Reply