ಅಭಿಮಾನಿ ಪ್ರಶಸ್ತಿ-೨೦೧೪ : ಪತ್ರಕರ್ತರಿಂದ ಅರ್ಜಿ ಆಹ್ವಾನ

  : ಕರ್ನಾಟಕ ಮಾಧ್ಯಮ ಅಕಾಡೆಮಿಯು ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ/ವರದಿ ಬರೆದ ಪತ್ರಕರ್ತರಿಗೆ ಕೊಡಮಾಡುವ ಅಭಿಮಾನಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
  ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ/ ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಒಂದು ಲಕ್ಷ ರೂ.ಗಳ ದತ್ತಿ ಸ್ಥಾಪಿಸಿದೆ. ಈ ದತ್ತಿಯಿಂದ ಪ್ರತಿವರ್ಷ ಕೊಡಮಾಡುವ ಅಭಿಮಾನಿ ಪ್ರಶಸ್ತಿಗಾಗಿ ೨೦೧೪ನೇ ಸಾಲಿನಲ್ಲಿ (೨೦೧೪ರ ಜನವರಿ-ಡಿಸೆಂಬರ್‌ವರೆಗೆ) ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ, ವರದಿಗಳು ಪ್ರಕಟಗೊಂಡಿರಬೇಕು.  ಅರ್ಜಿ ಸಲ್ಲಿಸಲು ಇಚ್ಛಿಸುವ ಪತ್ರಕರ್ತರು ತಮ್ಮ ಸ್ವವಿವರಗಳನ್ನು ಬಿಳಿ ಹಾಳೆಯಲ್ಲಿ ಬರೆದು, ಅಭಿಮಾನಿ ಪ್ರಶಸ್ತಿ-೨೦೧೪ ಎಂದು ದಾಖಲಿಸಿ, ಅದರ ಜೊತೆಗೆ ಸಾಮಾಜಿಕ ಸಮಸ್ಯೆಗಳಿಗೆ ಸಂಬಂಧಪಟ್ಟ ಒಂದು ಲೇಖನವನ್ನು ಮಾತ್ರ ಕಳುಹಿಸಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರರ್ಕರು ಬರೆದಿರುವ ವರದಿ, ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿದ್ದು, ಲೇಖನ, ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ಧೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.
  ಲೇಖನ, ವರದಿಗಳನ್ನು ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಅಭಿಮಾನಿ ಪ್ರಶಸ್ತಿ-೨೦೧೪ ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧. ಈ ವಿಳಾಸಕ್ಕೆ ಫೆ.೨೮ ರೊಳಗಾಗಿ ಕಳುಹಿಸಬಹುದಾಗಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಎಸ್. ಶಂಕರಪ್ಪ ತಿಳಿಸಿದ್ದಾರೆ.
Please follow and like us:
error