ಜು. ೩೦, ೩೧ ರಂದು ಜಿಲ್ಲಾ ಮಟ್ಟದ ಪುಸ್ತಕ ಮೇಳ : ಪ್ರಕಾಶಕರಿಗೆ ಆಹ್ವಾನ

ಕೊಪ್ಪಳ ಜು. : ಕೊಪ್ಪಳ ಜಿಲ್ಲಾ ಮಟ್ಟದ ಪುಸ್ತಕ ಮೇಳವನ್ನು ಜು. ೩೦ ಮತ್ತು ೩೧ ರಂದು ಎರಡು ದಿನಗಳ ಕಾಲ ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಪುಸ್ತಕ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಭಾಗವಹಿಸುವರು. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಹಾಗೂ ಹೊರಗಿನ ಪುಸ್ತಕ ಪ್ರಕಾಶಕರು ಹೆಚ್ಚಿನ ವಿವರಗಳನ್ನು ಸರ್ವ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error