ಕೊಪ್ಪಳದಲ್ಲಿ ಶಿಕ್ಷಕರ ದಿನಾಚರಣೆ

 ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಸೆ.೦೫ ರಂದು ಬೆಳಿಗ್ಗೆ ೧೦.೩೦ ಕ್ಕೆ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲೆಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಲಿದೆ.

  ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು. ರಾಜ್ಯ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ ಕಂತೆಪ್ಪ ಕುಳಗಿ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ, ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ ಸೇರಿದಂತೆ ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ನಗರಸಭೆ ಸದಸ್ಯರು ಭಾಗವಹಿಸುವರು.  ಹಿರೇಮ್ಯಾಗೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಭಾಷಾ ಉಪನ್ಯಾಸಕ ಗಂಗಾಧರ ಜಿ.ಕುರಟ್ಟಿ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು.
  ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲೆಯ ಹುಲಿಕಲ್ಲನ ಅಂತರಾಷ್ಟ್ರೀಯ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರಿಗೆ ವಿಶೇಷ ಸನ್ಮಾನ ಜರುಗಲಿದೆ. ಅಲ್ಲದೇ ಅಂದು ಮಧ್ಯಾಹ್ನ ೨.೩೦ ಕ್ಕೆ ಸಾಲುಮರದ ತಿಮ್ಮಕ್ಕನವರ ಸಹಾಯಾರ್ಥವಾಗಿ ಶಿಕ್ಷಕರ ಕಲಾ ವೃಂದದವರು ಮೈಸೂರ ಹುಲಿ ಟಿಪ್ಪು ಸುಲ್ತಾನ ಎಂಬ ನಾಟಕದ ಪ್ರದರ್ಶನ ನಡೆಯಲಿದೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೮.೦೦ ಗಂಟೆಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದಿಂದ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದವರೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರದ ಮೆರವಣಿಗೆ ಜರುಗಲಿದೆ.

Related posts

Leave a Comment