ನ.೦೮ ರಿಂದ ಕೊಪ್ಪಳ ತಾಲೂಕ ಮಟ್ಟದ ಪೈಕಾ ಕ್ರೀಡಾಕೂಟ ಉದ್ಘಾಟನೆ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದೈಹಿಕ ಶಿಕ್ಷಕರ ಸಂಘ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ ಪೈಕಾ ಕ್ರೀಡಾಕೂಟ ನ.೦೮ ರಿಂದ ನ.೦೯ ರವರೆಗೆ ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
 ಕಾರ್ಯಕ್ರಮದ ಉದ್ಘಾಟನೆಯನ್ನು ನ. ೮ ರಂದು ಬೆಳಿಗ್ಗೆ ೧೦ ಗಂಟೆಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ನೆರವೇರಿಸುವರು. ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷ ಮುದೇಗೌಡ ಮಾಲಿ ಪಾಟೀಲ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಉಪಾಧ್ಯಕ್ಷ ಅಮ್ಜದ್ ಪಟೇಲ್, ತಾ.ಪಂ.ಉಪಾಧ್ಯಕ್ಷೆ ಕರಿಯಮ್ಮ ದೇವಪ್ಪ ಹೊಸಳ್ಳಿ, ಜಿ.ಪಂ.ಸದಸ್ಯರಾದ ಡಾ|| ಸೀತಾ ಗೂಳಪ್ಪ ಹಲಗೇರಿ, ನಾಗನಗೌಡ ಮಾಲಿಪಾಟೀಲ್, ಕಸ್ತೂರೆಮ್ಮ ಬಿ.ಪಾಟೀಲ್, ವನಿತಾ ಗಡಾದ್, ಕೆ.ರಮೇಶ ಹಿಟ್ನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ.ಸುದರ್ಶನರಾವ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ, ಜಿಲ್ಲಾ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಹಿರೇಮಠ, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಮುರ್ತುಜಾಸಾಬ, ತಾಲೂಕ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಯ್ಯ ಪೂಜಾರ, ತಾಲೂಕ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರಪ್ಪ ಮುಧೋಳ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ಜಿ.ಗೊಂಡಬಾಳ, ಜಗದಯ್ಯ ಸಾಲಿಮಠ, ಜ್ಯೋತಿ ಎಂ.ಗೊಂಡಬಾಳ, ವೆಂಕಟೇಶ ಈಳಿಗೇರ ಸೇರಿದಂತೆ ಜಿ.ಪಂ., ತಾ.ಪಂ. ಹಾಗೂ ನಗರಸಭೆ ಸರ್ವ ಸದಸ್ಯರು ಭಾಗವಹಿಸುವರು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಎನ್.ಎಸ್.ಪಾಟೀಲ್   ತಿಳಿಸಿದ್ದಾರೆ.
Please follow and like us:
error