ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಪ್ರಕಾಶಕರ ನೋಂದಣಿಗಾಗಿ ಅರ್ಜಿ ಆಹ್ವಾನ

 ಕನ್ನಡ ಪುಸ್ತಕ ಪ್ರಾಧಿಕಾರವು  ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಪ್ರಕಾಶಕರ ನೋಂದಣಿಗಾಗಿ ಅರ್ಜಿ ಆಹ್ವಾನಿಸಿದೆ. 
ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ  ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೋಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆ ಇರುವ ಪ್ರಕಾಶಕರು ತಮ್ಮ ಹೆಸರು/ ವಿವರಗಳು ಮತ್ತು ತಮ್ಮಿಂದ ಈವರೆಗೆ ಪ್ರಕಟಿತವಾಗಿರುವ ಎಲ್ಲಾ ಪುಸ್ತಕಗಳ ಶೀರ್ಷಿಕೆ, ಪುಟ ಸಂಖ್ಯೆ, ಬೆಲೆ, ರಿಯಾಯಿತಿ ದರ ಇತ್ಯಾದಿಗಳ ವಿವರಗಳು, ಪ್ರಕಾಶನದ ಮುಖ್ಯಸ್ಥರು/ಮಾಲೀಕರು ಅಥವಾ ಆಡಳಿತಾಧಿಕಾರಿಗಳ ಎರಡು ಇತ್ತೀಚಿನ ಸ್ಟಾಂಪ್ ಸೈಜ್ ಭಾವಚಿತ್ರದೊಂದಿಗೆ ಅರ್ಜಿಗಳನ್ನು ಫೆ.೧೮ ರೊಳಗಾಗಿ ಆಡಳಿತಾಧಿಕಾಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಸಲ್ಲಿಸಬಹುದಾಗಿದೆ. 
ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ  ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಅಲ್ಲದೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ www.kannadapusthakapradhikara.comನಿಂದ ಪಡೆಯಬಹುದು. ವಿವರಗಳನ್ನು ಪ್ರಾಧಿಕಾರದ ಇ-ಮೇಲ್ ವಿಳಾಸ kannadappradhikara@gmail.com ಕ್ಕೆ ಡಿ.ಟಿ.ಪಿ. ಮಾಡಿ ಕಳುಹಿಸಿ, ನಂತರ ಭಾವಚಿತ್ರದೊಂದಿಗೆ ಅರ್ಜಿಯನ್ನು ಅಂಚೆ ಮೂಲಕ ರವಾನಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗೆ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು_ದೂರವಾಣಿ ಸಂಖ್ಯೆ:೦೮೦-೨೨೪೮೪೫೧೬/೨೨೦೧೭೭೦೪-ಇಲ್ಲಿ ಸಂಪರ್ಕಿಸಬಹುದು  

Related posts

Leave a Comment