ಸ್ವಚ್ಛ ಭಾರತ ಮಿಷನ್ ಯಶಸ್ವಿಗೆ ಕೈಜೋಡಿಸಿ – ಅಮರೇಶ್ ಕುಳಗಿ ಕರೆ.

ಕೊಪ್ಪಳ, ಜು.೦೨- ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಪಿಡಿಓ ಗಳು ಜವಾಬ್ದಾರಿಯನ್ನರಿತು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಕರೆ ನೀಡಿದರು.
      ಜಿಲ್ಲಾ ಪಂಚಾಯತಿ, ಯುನಿಸೆಫ್ ಹಾಗೂ ಬೆಂಗಳೂರಿನ ೬ಣh ಸೆನ್ಸ್ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ೩೦ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮೂರು ದಿನಗಳ ಬದಲಾವಣೆ, ನಿರ್ವಹಣೆ ಹಾಗೂ ನಾಯಕತ್ವ ವಿಷಯ ಕುರಿತು ನಗರದ ಬಿ.ಎಸ್. ಪವಾರ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದ
     ಕೊಪ್ಪಳ ಜಿಲ್ಲೆ ಸ್ವಚ್ಛ ಭಾರತ ಯೋಜನೆಯಡಿ ಉತ್ತಮ ಸಾಧನೆ ತೋರುತ್ತಿದ್ದು, ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಜನಪ್ರತಿನಿಧಿಗಳು ಅಧಿಕಾರಿಗಳೊಟ್ಟಿಗೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ.  ಆದರೆ ಪರಿಶ್ರಮದ ಜೊತೆಗೆ ಸಾರ್ವಜನಿಕರ ಭಾವನೆಗಳಲ್ಲಿ ಬದಲಾವಣೆ ತರಬೇಕಿದೆ.  ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಸೂಕ್ತ ನಿರ್ವಹಣೆ ಜೊತೆಗೆ ಸುಗಮ ಮುನ್ನಡೆಗೆ ನಾಯಕತ್ವವನ್ನು ಸಹ ಬೆಳೆಸಿಕೊಳ್ಳಬೇಕಿದೆ.  ಗ್ರಾಮ ಪಂಚಾಯತ್‌ನ ಎಲ್ಲಾ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಪಿಡಿಓಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಕರೆ ನೀಡಿದರು.
      ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ.ಡಿ.ಉದಪುಡಿ ಮಾತನಾಡಿ, ಹಿಂದುಳಿದ ಜಿಲ್ಲೆಯಾದ ಕೊಪ್ಪಳದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯನ್ನು ಉತ್ತಮವಾಗಿ ಹಾಗೂ ಕ್ಷೀಪ್ರಗತಿಯಲ್ಲಿ ಅನುಷ್ಠಾನಗೊಳಿಸಲು ಈ ತರಬೇತಿ ಕಾರ್ಯಾಗಾರ ಉಪಯುಕ್ತವಾಗಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮಾನಸಿಕ ಸದೃಢತೆ ಹೆಚ್ಚಿಸುವುದಲ್ಲದೇ,  ಕ್ಷೇತ್ರ ಮಟ್ಟದಲ್ಲಿ ಅಧಿಕಾರಿಗಳ ಹಾಗೂ ಸಾರ್ವಜನಿಕರ ಸಹಭಾಗಿತ್ವ ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ತರಬೇತಿ ಪೂರಕವಾಗಿದೆ. ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
       ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನರೇಂದ್ರನಾಥ ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಬೆಂಗಳೂರಿನ ೬ಣh ಸೆನ್ಸ್ ಸಂಸ್ಥೆಯ ತರಬೇತಿಯ ಸಂಪನ್ಮೂಲ ವ್ಯಕ್ತಿ ಅಬ್ರಹಾಂ ರೂಬಿ, ಯುನಿಸೆಫ್‌ನ ರಾಜ್ಯಮಟ್ಟದ ಅಧಿಕಾರಿಗಳಾದ ರಾಮಸ್ವಾಮಿ ಕೃಷ್ಣನ್, ಸೋನಿ ಜಾರ್ಜ್, ಯುನಿಸೇಫ್ ಸಂಸ್ಥೆಯ ಕೊಪ್ಪಳ ಜಿಲ್ಲಾ ಘಟಕದ ಪ್ರತಿನಿಧಿ ಹರೀಶ ಜೋಗಿ ಹಾಗೂ  ಹಾಗೂ ಸಂಸ್ಥೆಯ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥತರಿದ್ದರು.  ಕಾರ್ಯಗಾರದಲ್ಲಿ ಜಿಲ್ಲೆಯ ೩೦ ಗ್ರಾಮ ಪಂಚಾಯತಿಗಳ ಪಿಡಿಓಗಳು ಭಾಗವಹಿಸಿದ್ದರು.

Related posts

Leave a Comment