ಕಿನ್ನಾಳ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕೊಪ್ಪಳ : ದಿನಾಂಕ ೧೨-೦೩-೨೦೧೩ ರ ಮಂಗಳವಾರ ಕಿನ್ನಾಳ ಗ್ರಾಮದಲ್ಲಿ ಗ್ರಾಮ ಪಂಚಾಯತ ಮತ್ತು ರಕ್ಷಣ್ ಚಾರಿಟೆಣ್ಬಲ್ ಟ್ರಸ್ಟ (ರಿ) ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಘವೇಂದ್ರ ಹಿಟ್ನಾಳ ನೆರವೆರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಪ್ರಸನ್ನ ಗಡಾದ, ಕಿನ್ನಾಳ ಗ್ರಾ.ಪಂ. ಅಧ್ಯಕ್ಷರಾದ ವೀರಬದ್ರಪ್ಪ ಗಂಜಿ, ಅಭಿವೃದ್ಧಿ ಅಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು, ಊರಿನ ನಾಗರಿಕರು, ಉಪಸ್ಥಿತರಿದ್ದರು. 
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ ಶುದ್ದ ನೀರಿನ ಕುಡಿಯುವುದರ ಪ್ರಯೋಜನಗಳನ್ನು ಜನತೆಗೆ ತಿಳಿಸಿದರು. 
Please follow and like us:
error